ಬೆಂಗಳೂರು: ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 36 ಕೈ ಮುಖಂಡರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೆವಾಲ ಸೇರಿದಂತೆ ಒಟ್ಟು 36ಮಂದಿ ಕೈ ಮುಖಂಡರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.ಇದೀಗ ಈ ಸಂಬಂಧ 36ಕೈ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
