Home ಕರಾವಳಿ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಕೊಂಚ ತಡವಾಗಿ ಆಗಮಿಸಿದ್ದರೂ ಕೂಡ ಈಗಾಗಲೇ ಮಳೆ ಆರಂಭವಾಗಿದೆ. ಆದರೂ ಕೂಡ ಅಲ್ಲಲ್ಲಿ ಅಗತ್ಯ ಇರುವಷ್ಟು ಮಳೆ ಆಗದೇ ಇರುವುದು ರೈತರಿಗೆ ಸಂಕಷ್ಟ ಎದುರಾಗಿದೆ. ಈ ನಡುವೆ ನಿನ್ನೆಯಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ. ಇದೀಗ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಒಂದೆರಡು ಕಡೆಗಳಲ್ಲಿ ಅದರಲ್ಲು ಕರಾವಳಿ ಭಾಗಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

 
Previous articleನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ
Next articleಬಿಗ್‌ ಬಾಸ್‌ ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‌ಐಆರ್‌