
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶದ ಹಿನ್ನೆಲೆ ಸಂತಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ 5 ಪ್ರಕರಣಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೌದು, ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದ ಸಂದರ್ಭ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಈ ನಿಯಮಗಳನ್ನು ಉಲ್ಲಂಘಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸಲಾಗಿತ್ತು. ಈ ಹಿನ್ನೆಲೆ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿ ಇದೀಗ ಹೈಕೋರ್ಟ್ ಆದೇಶಿಸಿದೆ.
