
ಬೆಂಗಳೂರು: ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಣಿಕ್ಯ ಚಾಮರ ವಜ್ರ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಒಕ್ಕಲಿಗ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ನಾಲ್ಕೈದು ವಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಇಂದು ಕರ್ಕಾಟಕ ಲಗ್ನ ಸುಮುಹೂರ್ತದಲ್ಲಿ ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನವದಂಪತಿಗಳಿಗೆ ಸ್ಯಾಂಡಲ್ ವುಡ್ ಸೇರಿದಂತೆ ಟಾಲಿವುಡ್, ಕಾಲಿವುಡ್ ನ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.,. ಅಷ್ಟೇ ಅಲ್ಲದೇ ಅನೇಕ ರಾಜಕೀಯ ಗಣ್ಯರು ಕೂಡ ಮದುವೆ ಸಮಾರಂಭಕ್ಕೆ ಆಗಮಿಸಿ ವಧು-ವರರಿಗೆ ಶುಭ ಹಾರೈಸಿದರು. ವಿವಾಹ ಸಮಾರಂಭದ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು, ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ನಡೆಯಲಿದ್ದು, ಈ ಸಂಭ್ರಮದಲ್ಲೂ ಕೂಡ ಅನೇಕ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
