Home ಸಿನೆಮಾ ಅನಧಿಕೃತ ಮಾಹಿತಿ ಪ್ರಕಟಿಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಅನಧಿಕೃತ ಮಾಹಿತಿ ಪ್ರಕಟಿಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಪೊಲೀಸ್‌ ವಶದಲ್ಲಿದ್ದಾರೆ. ದರ್ಶನ್‌ ಬಂಧನದ ಬಳಿಕ ಯಾರ ಸಂಪರ್ಕಕ್ಕೂ ಸಿಗದೇ, ತಮ್ಮ ಸೋಶಿಯಲ್‌ ಮೀಡಿಯಾ ಖಾತಯನ್ನು ನಿಷ್ಕ್ರೀಯಗೊಳಿಸಿದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ಇದೀಗ ಮೊದಲ ಬಾರಿಗೆ ಈ ವಿಚಾರವಾಗಿ ಪ್ರತಿಕ್ರೀಯಿಸಿದ್ದಾರ.

ತಮ್ಮ ಸೋಶಿಯಲ್‌ ಮೀಡಿಯಾ ಖಾತಯನ್ನು ಸಕ್ರಿಯಗೊಳಿಸಿರುವ ಅವರು ಪೋಸ್ಟ್‌ವೊಂದನ್ನು ಹಾಕಿ ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ದರ್ಶನ್‌ ಹಾಗೂ ಅವರ ಕುಟುಂಬದ ಬಗ್ಗೆ ಯಾವುದೇ ಸುಳ್ಳು ಸುದ್ದಿಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, “ಮೊದಲಿಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತನೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಕಳೆದ ಕಲವು ದಿನಗಳಿಂದ ದರ್ಶನ್‌, ನಾನು, ನನ್ನ ಹದಿಹರಯದ ಮಗ, ದರ್ಶನ್‌ ಎಲ್ಲಾ ಸ್ನೇಹಿತರು, ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ದುಃಖವಾಗಿದೆ. ಗೌರವಾನ್ವಿತ ನ್ಯಾಯಾಲಯವು ಹೊರಡಿಸಿದ ಈ ಆದೇಶ ಪತ್ರವನ್ನು ಇಲ್ಲಿ ನೀಡಿದ್ದೇನ. ಈ ಮೂಲಕ ವಿವಿಧ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ ಗಳಲ್ಲಿ ಸುಳ್ಳು ಸುದ್ದಿಗಳನ್ನ ಹರಡುವುದನ್ನು ನಿಲ್ಲಿಸುತ್ತೀರಿ ಎಂದು ಭಾವಿಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳು ನೀಡಿರುವ ಅಧಿಕೃತ ಮಾಹಿತಿಯನ್ನು ಮಾತ್ರ ಪ್ರಕಟಿಸಬೇಕಂದು ನಾನು ಎಲ್ಲರಲ್ಲೂ ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡಶ್ವರಿ ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯಮೇವ ಜಯತೇ” ಎಂದು ಹೇಳಿದ್ದಾರೆ.

 
Previous articleಅಂತರಾಷ್ಟ್ರೀಯ ಯೋಗ ದಿನ: ಜು. 21 ರಂದು ಉಡುಪಿಯಲ್ಲಿ ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ’
Next articleಮೆಂತೆ ಚಹಾ ಸೇವನೆಯಿಂದ ಆರೋಗ್ಯಕ್ಕೆ ಅದ್ಭುತ ಲಾಭಗಳು ಸಿಗುತ್ತವೆ..