Home ರಾಜ್ಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

ಬೆಂಗಳೂರು: ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ  ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಅಪರ್ಣಾ ಚಿಕಿತ್ಸೆ ಪಡೆಯುತ್ತಿದ್ದ ಅಪರ್ಣಾ ಇದೀಗ ಇಹಲೋಕ ತ್ಯಜಿಸಿದ್ದು, ಪತ್ನಿಯ ನಿಧನದಿಂದ ಪತಿ ನಾಗರಾಜ್‌ ವಸ್ತಾರೆ ಭಾವುಕರಾಗಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪತಿ ನಾಗರಾಜ್‌ ವಸ್ತಾರೆ, ಎರಡು ವರ್ಷದ ಹಿಂದೆ ಜುಲೈನಲ್ಲಿ ಅಪರ್ಣಾಗೆ ಶ್ವಾಸಕೊಶದ ಕ್ಯಾನ್ಸರ್‌ ಇರುವುದು ಗೊತ್ತಾಯ್ತು. ಮೊದಲು ಡಾಕ್ಟರ್‌ ಇನ್ನು ಆರು ತಿಂಗಳು ಮಾತ್ರ ಅಪರ್ಣಾ ಬದುಕುವುದು ಎಂದು ಹೇಳಿದ್ದರು. ಆದರೆ ಛಲಗಾತಿ ಆದ ಅವಳು ಒಂದುವರೆ ವರ್ಷ ಬದುಕಿದ್ದಳು. ಇದೀಗ ಅವಳು ನಮ್ಮೊಂದಿಗಿಲ್ಲ ಎಂದು ಹೇಳಿದ್ದಾರೆ. ಬೆಳಿಗ್ಗೆ 7:30 ಅಪರ್ಣಾ ಮೃತದೇಹವನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುತ್ತೇವೆ. ಬಳಿಕ 11:30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಬನಶಂಕರಿಯ ವಿದ್ಯುತ್‌ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು, ಕೇವಲ ನಿರೂಪಣೆ ಮಾತ್ರ ಅಲ್ಲದೇ ನಟನೆಯ ಮೂಲಕವೂ ಗುರುತಿಸಿಕೊಂಡಿದ್ದ ಅಪರ್ಣಾ ಅವರು ಸಿನಿಮಾ ಮತ್ತು ಧಾರವಾಹಿಗಳಲ್ಲೂ ಅಭಿನಯಿಸಿದ್ದಾರೆ. ಅಚ್ಚ ಕನ್ನಡದಲ್ಲಿಯೇ ನಿರರ್ಗಳವಾಗಿ ನಿರೂಪಣೆ ಮಾಡುವ ಇವರ ನಿರೂಪಣಾ ಶೈಲಿಗೆ ಸಾಕಷ್ಟು ಮಂದಿ ಫ್ಯಾನ್ಸ್‌ ಇದ್ದಾರೆ. ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ನಿರೂಪಸಿರುವ ಅಪರ್ಣಾ 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಇಷ್ಟು ಮಾತ್ರ ಅಲ್ಲದೇ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಕೇಳಿಬರುವ ಪ್ರಯಾಣಿಕರ ಸೂಚನೆಗಳಿಗೆ ಅಪರ್ಣಾ ಧ್ವನಿ ನೀಡಿದ್ದರು. ನಿರೂಪಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಪರ್ಣಾ ನಿವಾಸದ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.

 
Previous articleಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿಟ್ಟು ತಿನ್ನುವ ಅಭ್ಯಾಸ ನಿಮಗೂ ಇದೆಯೇ? ಎದುರಾಗುತ್ತದೆ ಈ ಸಮಸ್ಯೆಗಳು
Next articleನಿಮ್ಮ ಬಳಿ ಅಗತ್ಯಕ್ಕಿಂತ ಹೆಚ್ಚು ಸಿಮ್‌ ಇದ್ಯಾ..? ಹಾಗಾದ್ರೆ ಈ ಮಾಹಿತಿ ಓದಿ