ಬೆಂಗಳೂರು: ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅಭಿನಯದ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರದ ಎರಡನೇ ಪೋಸ್ಟರ್ ಬಿಡುಗಡೆಯಾಗಿದೆ. ಮಹಾನ್ ಮರಾಠಾ ಚಕ್ರವರ್ತಿಯ 395 ನೇ ಜನ್ಮ ದಿನಾಚರಣೆ ಅಂಗವಾಗಿ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.
ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜರಾಗಿ ಕಾಣಿಸಿಕೊಳ್ಳಲಿದ್ದಾರೆ. ಸ್ಟಾರ್ ಡೈರೆಕ್ಟರ್ ಸಂದೀಪ್ ಸಿಂಗ್ ಈ ಚಿತ್ರದ ಸಾರಥ್ಯ ವಹಿಸಿದ್ದಾರೆ.
ದೇವಿ ಭವಾನಿಯ ಎದುರುಗಡೆ ನಿಂತಿರುವ ಛತ್ರಪತಿ ಮಹಾರಾಜರ ಚಿತ್ರವನ್ನು ಚಿತ್ರತಂಡವು ಹಂಚಿಕೊಂಡಿದೆ.
ನಿರ್ದೇಶಕ ಸಂದೀಪ್ ಸಿಂಗ್ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು, “ಜೈ ಭವಾನಿ! ಜೈ ಶಿವಾಜಿ! ಹರ್ ಹರ್ ಮಹಾದೇವ್!! ಮಹಾನ್ ಯೋಧ , ಭಾರತದ ಹೆಮ್ಮೆ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜನ್ಮ ವಾರ್ಷಿಕೋತ್ಸವದಂದು ನಾವು ಹೆಮ್ಮೆಯಿಂದ ಫಸ್ಟ್ ಲುಕ್ ಅನ್ನು ಪ್ರಸ್ತುತಪಡಿಸುತ್ತಿದ್ದೇವೆ. ಇಡೀ ಭೂ ಖಂಡದ ಹಣೆಬರಹವನ್ನು ಬದಲಾಯಿಸಿದ ದಂತಕಥೆಯ ರಾಜನ ಶಕ್ತಿ ಮತ್ತು ಭಕ್ತಿಯನ್ನು ಪ್ರದರ್ಶಿಸುತ್ತಿದ್ದೇವೆ. 21 ಜನವರಿ 2027 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
