
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರ ಕುಟುಂಬ ನೋವಿನಲ್ಲಿದೆ. ಪತಿ ಅರೆಸ್ಟ್ ಆದ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿನ ಪ್ರೊಫೈಲ್ ಫೋಟೊವನ್ನು ಡಿಲೀಟ್ ಮಾಡುವುದರ ಜೊತೆಗೆ ಪತಿಯನ್ನ ಅನ್‌ಫಾಲೋ ಕೂಡ ಮಾಡಿದ್ದರು.
ಇದೀಗ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿ ಪುತ್ರ ವಿನೀಶ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ” ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವುದಕ್ಕೆ ನಿಮಗೆಲ್ಲಾ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವೂ ಇಲ್ಲ” ಎಂದು ಬರೆದುಕೊಂಡಿದ್ದಾರೆ.
