
ಉಡುಪಿ: ಶನಿವಾರ ಬಕ್ರೀದ್ ಹಬ್ಬ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಬಕ್ರೀದ್ ಆಚರಣೆ ವೇಳೆ ಅನಧಿಕೃತ ಪ್ರಾಣಿ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಅನಧಿಕೃತ ಪ್ರಾಣಿ ವಧೆ ತಡೆಗಟ್ಟಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿದ್ದು, ಚೆಕ್‌ಪೋಸ್ಟ್ ಗಳಲ್ಲಿ ಅನಧಿಕೃತ ಜಾನುವಾರುಗಳ ಸಾಗಾಣಿಕೆಯಾಗದಂತೆ ನಿಗಾ ವಹಿಸಲು ಸೂಚಿಸಿದ್ದಾರೆ. ಇದರೊಂದಿಗೆ ಬಕ್ರಿದ್ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
