
ಉಡುಪಿ: ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಅನುದಾನ ಹಂಚಿಕೆಯಲ್ಲಿ ಕರಾವಳಿ ಭಾಗಕ್ಕೆ ಸಕಾರ ಮಲತಾಯಿ ಧೋರಣೆ ತೋರಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ನಲ್ಲಿಯೂ ಸರ್ಕಾರ ಕರಾವಳಿ ಜಿಲ್ಲೆಯ ಬಗ್ಗೆ ನಿಲಕ್ಷ್ಯವನ್ನು ತೋರಿ, ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆಯನ್ನು ತೋರಿದೆ. ಆರೋಗ್ಯ, ಶಿಕ್ಷಣ, ಲೋಕೋಪಯೋಗಿ, ಮೀನುಗಾರಿಕೆ ಸಹಿತ ಇಲಾಖೆಗಳ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವಲ್ಲಿ ಸಕಾರ ವಿಫಲವಾಗಿದೆ.ಕೃಷಿಕರು, ಮೀನುಗಾರರು, ಮೂತೆದಾರರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಹೊಸ ಯೋಜನೆಯನ್ನು ರೂಪಿಸಿಲ್ಲ. ರಾಜ್ಯದ 224 ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದಿದ್ದಾರೆ.
ಇನ್ನು, ಬಿಜೆಪಿ ಸಕಾರದಲ್ಲಿ ಜಾರಿಯಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ, ಜಿಲ್ಲೆಗೊಂದು ಗೋಶಾಲೆ ಯೋಜನೆ, ಅಗ್ನಿವೀರ್ ತರಬೇತಿ ಯೋಜನೆ ಮೊದಲಾದ ಪ್ರಮುಖ ಯೋಜನೆಗಳನ್ನು ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ನಿರಾಶಾದಾಯಕ ಬಜೆಟ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
