
ಕುಂದಾಪುರ: ಇತ್ತೀಚೆಗಷ್ಟೇ ಬಹುಮತದಿಂದ ಅಧಿಕಾರ ಪಡೆದಿರುವ ಕಾಂಗ್ರೆಸ್ ಸರ್ಕಾರವು ಬಹಳ ಚುರುಕಾಗಿ ತಮ್ಮ ಕಾರ್ಯಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಸಚಿವರು ತಮ್ಮ ಕೆಲಸವನ್ನು ಈಗಾಗಲೇ ಆರಂಭಿಸಿದ್ದು, ಈ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದರು. ಇದೀಗ ಇಂದು ಬೆಳಿಗ್ಗೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದುಕೊಂಡರು.
ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ಕೊಟ್ಟಿರುವ ಪರಮೇಶ್ವರ್ ಅವರು ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಭಾಗಿಯಾದರು. ಗೃಹ ಸಚಿವರಿಗೆ ದೇವಸ್ಥಾನದ ಆಡಳಿತ ಮಂಡಳಿ ಸನ್ಮಾನ ಮಾಡಿ ಶುಭಹಾರೈಸಿದರು.
