
ಕೋಟ: ಉಡುಪಿ ಜಿಲ್ಲೆಯ ಹಲವೆಡೆ ರವಿವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವಸೆ ಸಮೀಪ ಕಿರಾಡಿಯಲ್ಲಿ ನಡೆದಿದೆ.
ಮೃತರನ್ನು ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ(24) ಎಂದು ಗುರುತಿಸಲಾಗಿದೆ.
ಮನೆಯ ಹೊರಗಡೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭಿರವಾಗಿ ಗಾಯಗೊಂಡಿದ್ದ ಪ್ರಮೋದ್ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
