
ಉಡುಪಿ/ದ.ಕ: ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಬರ ಎದುರಾಗಿದೆ. ಮಳೆ ಇಲ್ಲದೇ ಜನತೆ ಕಂಗಾಲಾಗಿದ್ದು, ಆಗೊಂದು ಈಗೊಂದು ಮಳೆ ಬಂದು ಹೋಗುತ್ತಿದೆ. ಇದೀಗ ಸೆಪ್ಟೆಂಬರ್ 30 ರಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಇಲ್ಲದೆ ಕಂಗಾಲಾಗಿದ್ದ ಕರಾವಳಿ ಜನತೆಗೆ ಇತ್ತೀಚೆಗೆ ಅಲ್ಲಲ್ಲಿ ಮಳೆಯಾಗುತ್ತಿದೆ. ನಾಳೆಯಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24ಗಂಟೆಗಳಲ್ಲಿ ಕರಾವಳಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇನ್ನು, ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
