ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಇಂದು ಡಾ. ಜಿ ಪರಮೇಶ್ವರ್ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಸಚಿವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತ ಕೋರಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಎಂ.ಎ. ಗಫೂರ್, ರಮೇಶ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಕೆ. ಕೃಷ್ಣಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
