ಉಡುಪಿ: ಮಳೆ ಕಾಣದೇ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಕೂಡ ಉತ್ತಮ ಮಳೆಯಾಗಿದ್ದು, ಮುಂದಿನ 5ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಸಮುದ್ರದ ಅಲೆಗಳು ಹೆಚ್ಚಾಗುವ ಹಿನ್ನೆಲೆ ಮುಂದಿನ 5ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
