Home ಕರ್ನಾಟಕ ಕರಾವಳಿ ಟಿಪ್ಪರ್‌, ಮರಕ್ಕೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಟಿಪ್ಪರ್‌, ಮರಕ್ಕೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

0
ಟಿಪ್ಪರ್‌, ಮರಕ್ಕೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಸುರತ್ಕಲ್:‌ ತಮಿಳುನಾಡು ನೋಂದಣಿಯ ಕಾರೊಂದು ಟಿಪ್ಪರ್‌ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್‌ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾರು ಚಾಲಕ ಅರ್ಜುನ್ ಎಂದು ಗುರುತಿಸಲಾಗಿದೆ. ಸಹ ಪ್ರಯಾಣಿಕರಾದ ಮೊಹಮ್ಮದ್‌ ಫಿಜಾನ್‌ ಹಾಗೂ ಅನಿರಿಧ್‌ ನಾಯರ್‌ ಗಂಭಿರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಸಾರ್ಜನಿಕರ ಸಹಕಾರದಿಂದ ಎರಡು ಗಂಟೆಯ ಕಾರ್ಯಾಚರಣೆಯ ಬಳಿಕ ಶವವನ್ನು ಹೊರತೆಗೆಯಲಾಯಿತು ಎನ್ನಲಾಗಿದೆ.

 

LEAVE A REPLY

Please enter your comment!
Please enter your name here