
ಮಂಗಳೂರು: ವಿದೇಶದಿಂದ ಗುದದ್ವಾರದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಕಸ್ಟಮ್ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನದಲ್ಲಿ ನಡೆದಿದೆ.
ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯು ಒಟ್ಟು 20.14 ಲಕ್ಷ ರೂ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. 24 ಕ್ಯಾರೆಟ್‌ನ 345ಗ್ರಾಂ ಚಿನ್ನವನ್ನು ಪೇಸ್ಟ್ ಮಾಡಿ ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಲೇಪಿಸಿ ಗುದದ್ವಾರದಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸಿದ್ದರು. ಈ ವೇಳೆ ಡಿಟೆಕ್ಟರ್ ಮೂಲಕ ಮಹಿಳೆ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಕಂಡುಹಿಡಿಯಲಾಗಿದೆ.
