
ಹಾಸನ: ಕರ್ನಾಟಕದ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಹಾಸನದಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಗರಿಷ್ಠ ಲಾಭವನ್ನು ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಾನು ನಿಧರಿಸಿದ್ದೇನೆ. ನನ್ನ 30ವರ್ಷಗಳ ರಾಜಕೀಯದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10ವರ್ಷ ಶಾಸಕನಾಗಿ, 20ವರ್ಷ ಮುಖ್ಯಮಂತ್ರಿಯಾಗಿ, 4ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿದ ಬಳಿಕ ಸದಾನಂದ ಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಕುರಿತು ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ಮೋದಿ ಅವರ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.
