ಶಿರಸಿ: ತಾಲೂಕಿನ ಇಸಳೂರು ಸಮೀಪ ಎರಡು ಬಸ್ಸುಗಳಿ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಶಿರಸಿಯಿಂದ ಹೊರಟಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿರಸಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ.
