
ಮಂಗಳೂರು: ದೇವರ ಎದುರು ಹುಲಿವೇಷ ಧರಿಸಿ ಕುಣಿಯುತ್ತಿದ್ದ ವೇಳೆ ಹುಲಿವೇಷಧಾರಿಯೊಬ್ಬ ಆಯ ತಪ್ಪಿ ಬಿದ್ದು ಗಾಯಗೊಂಡಿರುವ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ.
ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಘಟನೆ ಸಂಭವಿಸಿದೆ. ಹುಲಿವೇಷಧಾರಿಯೊಬ್ಬ ಹುಲಿ ಕುಣಿತ ಮಾಡುವ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ್ದು, ಹುಲಿವೇಷಧಾರಿಗೆ ಗಾಯಗಳಾಗಿದ್ದವು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಯುವಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
