Home ಕರ್ನಾಟಕ ಕರಾವಳಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂ ನಷ್ಟ

ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂ ನಷ್ಟ

0

ಉಪ್ಪಿನಂಗಡಿ: ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ಹಾಸನದ ಶಿರಾಡಿ ಘಾಟ್‌ನಲ್ಲಿ ನಡೆದಿದೆ.


ಹಾಸನ ಕಡೆಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ಕಿ ಸಾಗುತ್ತಿರುವಾಗ ಅಗ್ನಿ ಅವಘಡ ಸಂಭವಿಸಿದ್ದು, ಚಾಲಕ ಮತ್ತು ನಿರ್ವಾಹಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಗಿತ್ತು. ಇನ್ನು, ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

LEAVE A REPLY

Please enter your comment!
Please enter your name here