ಕುಂದಾಪುರ: ಆಯತಪ್ಪಿ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕುಂದಾಪುರದ ಖಾಸಗಿ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ತನ್ವಿ ಎಂದು ಗುರುತಿಸಲಾಗಿದೆ.
9ನೇ ತರಗತಿ ವಿದ್ಯಾಭ್ಯಾಸ ಮಾಡುವ ಸಲುವಾಗಿ ಕುಂದಾಪುರ ಖಾಸಗಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರವೇಶಾತಿಯನ್ನು ಪಡೆಯಲಾಗಿತ್ತು. ಶಾಲೆಯಲ್ಲಿ ವಸತಿ ಸೌಲಭ್ಯ ಇದ್ದ ಕಾರಣ ಆಕೆ ಅಲ್ಲಿಯೇ ಉಳಿದುಕೊಂಡಿದ್ದರು. ಕಾಲು ಜಾರಿ ವಿದ್ಯಾರ್ಥಿನಿ ಮಹಡಿಯಿಂದ ಕೆಳಗೆ ಬಿದ್ದಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
