ಹೆಬ್ರಿ: ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ಕಾಲು ಜಾರಿ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ನಡೆದಿದೆ.
ಮೃತರನ್ನು ಕಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರ ಹುತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಸ್ನಾನಕ್ಕೆಂದು ನದಿಗೆ ತೆರಳಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಪ್ರಕರಣ ಸಂಬಂಧ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
