
ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಸಮಯದಿಂದ ಬಾಕಿ ಇರುವ ನಿಗಮ-ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ ಬಳಿಕ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.
ಇನ್ನು, ಸಿಎಂ ಅಂದರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿರುವ ಬಗ್ಗೆ ಮಾತನಾಡಿದ ಅವರು, ನಾನು 1983ರಲ್ಲಿ ಶಾಸಕನಾಗಿ ನಂತರ ಸಚಿವನಾದವನು, ಆವಾಗ ಯಾರೂ ನನ್ನ ಈ ರೀತಿ ಕರೆದಿಲ್ಲ. ಹರೀಶ್ ಪೂಂಜಾ ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದವನು. ಪಾಪ ರಾಜಕೀಯದಲ್ಲಿ ಇನ್ನೂ ಬಚ್ಚಾ ಎಂದು ತಿರುಗೇಟು ನೀಡಿದರು.
