ಮಂಗಳೂರು: ತಲೆಗೆ ಗುಂಡುಹಾರಿಸಿಕೊಂಡು ಪಿಎಸ್ಐ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ನಡೆದಿದೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಆತ್ಮಹತ್ಯೆಗೆ ಶರಣಾದವರು. ಇವರು ಮೂಲತಃ ರಾಯಚೂರು ನಿವಾಸಿಯಾಗಿದ್ದು, ಸರ್ವೀಸ್ ರಿವಾಲ್ವರ್ನಿಂದ ಝಾಕಿರ್ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆಯ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಬೇಕಿದೆ.
