
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದ, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿದೆ. ಈ ಮೂಲಕ ಡಿಕೆ.ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
