
ಮಡಿಕೇರಿ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ವಿಧ್ಯಾರ್ಥಿನಿ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ನಡೆಸಿದ ಆರೋಪಿ ಪ್ರಕಾಶ್ ಆಕೆಯನ್ನು ಎಳೆದೊಯ್ದು ರುಂಡವನ್ನು ಕತ್ತರಿಸಿ ಪರಾರಿಯಾಗಿದ್ದನು. ಇದೀಗ ಆರೋಪಿಯನ್ನು ಆತನ ಸ್ವಗ್ರಾಮ ಹಮ್ಮಿಯಾಲದಲ್ಲೆ ಬಂಧಿಸಲಾಗಿದೆ ಎನ್ನಲಾಗಿದೆ.
ವಿಧ್ಯಾರ್ಥಿನಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ಇದನ್ನು ಅಲ್ಲಗೆಳೆದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯ ವಿಚಾರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನದ ವೇಳೆಗೆ ನೀಡುವುದಾಗಿ ತಿಳಿಸಲಾಗಿದೆ.
