
ತುಮಕೂರು: ಇಲ್ಲಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.
ಮೃತರನ್ನು ವೀರಾಪುರ ಗ್ರಾಮದ ನಿವಾಸಿಗಳಾದ ಯಮುನಾ, ದೊಡ್ಡಣ್ಣ ಮತ್ತು ಸಣ್ಣಮ್ಮ ಎಂದು ಗುರುತಿಸಲಾಗಿದೆ. ನಾಲ್ವರು ಚಲಿಸುತ್ತಿದ್ದ ಈ ಕಾರಿನಲ್ಲಿ ಪ್ರವೀಣ್ ಎನ್ನುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರು ಕುಟುಂಬ ಸಮೇತ ಧಮಸ್ಥಳಕ್ಕೆ ಹೊರಟಿದ್ದರು ಎನ್ನಲಾಗಿದೆ.
ಇನ್ನು, ಘಟನಾ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
