
ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿದ್ದು, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ತಿಳಿಸಿದ್ದಾರೆ.
