
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ್ದಕ್ಕೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನದ ಬೆನ್ನಲ್ಲೇ ಸೆಲಿಬ್ರೆಟಿಗಳು ಸೇರಿದಂತೆ ಹುಲಿ ಉಗುರು ಧರಿಸಿರುವ ಅನೇಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿತ್ತು. ಈ ಹಿನ್ನೆಲೆ ನಟ ಜಗ್ಗೇಶ್ ವಿರುದ್ಧ ಕೂಡ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಸಂಬಂಧ ಇದೀಗ ಜಗ್ಗೇಶ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವರಿಗೆ ಅರಣ್ಯಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಇದನ್ನು ತಡೆಹಿಡಿಯುವಂತೆ ಜಗ್ಗೇಶ್ ಕೋರ್ಟ್ ಮೆಟ್ಟಿಲೇರಿದ್ದರು. ನಟ ಜಗ್ಗೇಶ್ ವಿರುದ್ಧದ ಕ್ರಮ ಕಾನೂನುಬಾಹಿರ ಎನ್ನುವ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ನಟ ಜಗ್ಗೇಶ್ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ ನೀಡಿರುವ ಹುರಿತು ಜಗ್ಗೇಶ್ ಅವರು ಸಂದರ್ಶನವೊಂದರಲ್ಲಿ ಹೇಳಿದ್ದರು. ಇದನ್ನು ಆಧರಿಸಿಕೊಂಡು ಅರಣ್ಯಾಧಿಕಾರಿಗಳು ಜಗ್ಗೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಲ್ಲದೇ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದ್ದಲ್ಲದೆ, ಜಗ್ಗೇಶ್ ಗೆ ನೋಟಿಸ್ ಕೂಡ ನೀಡಿದ್ದರು.
