ಬೆಂಗಳೂರು : ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೋಟಿಸ್ ನೀಡಿದೆ.
ಒಂದು ವಾರದೊಳಗೆ ಹೆಚ್ಡಿಕೆ ಆಯೋಗದ ಎದುರು ಹಾಜರಾಗಿ ಸಮಜಾಯಿಷಿ ನೀಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧುರಿ ಹೇಳಿದ್ದಾರೆ.
ಹೆಚ್ಡಿಕೆ ಒಬ್ಬ ಹಿರಿಯ ರಾಜಕಾರಣಿ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಮಹಿಳೆಯರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭಕ್ಕೆ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ ಎಂದು ಹೇಳಿದರು.
