Home ಕರ್ನಾಟಕ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಇಂದು ಮತ್ತು ನಾಳೆ ರಾಜ್ಯದ ವಿವಿಧೆಡೆ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಯಾವುದೇ ಅಡ್ಡಿ ಆಂತಕಗಳು ಎದುರಾಗದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 775 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈವರೆಗೆ ಒಟ್ಟು 3.31ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಬೆಳಿಗ್ಗೆ 10:30 ರಿಂದ ಪರೀಕ್ಷೆ ಆರಂಭವಾಗಲಿದ್ದು, ಇಂದು ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಇನ್ನು, ವೆಬ್‌ಕಾಸ್ಟಿಂಗ್‌ ಮೂಲಕ ನಿಗಾ ವಹಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಣಾ ನಿರ್ದೇಶಕರು ತಿಳಿಸಿದ್ದಾರೆ ಎನ್ನಲಾಗಿದೆ.

 
Previous articleಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ: ಭಾರತದ ಕೆಲವು ಭಾಗಗಳಲ್ಲೂ ಕಂಪನದ ಅನುಭವ