ಮಂಗಳೂರು/ಉಡುಪಿ: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಬಹಳ ಕುತೂಹಲವನ್ನು ಕೆರಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಗೆಲುವು ಸಾಧಿಸುತ್ತದ್ದಂತೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಅವರು ಗೆಲುವನ್ನು ಸಾಧಿಸಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಿಹಿ ತಿಂಡಿ ಹಂಚುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೇ ಮತ ಎಣಿಕೆಯ ಕೇಂದ್ರದೆದುರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಪಕ್ಷದ ಮುಖಂಡರು, ಕಾಯಕತರು ಬಿಜೆಪಿ ಪರ ಘೋಷಣೆ ಕೂಗಿದ್ದಾರೆ.
ಇನ್ನು, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯಥಿ ಕೋಟ ಶ್ರೀನಿವಾಸ್ ಪೂಜಾರಿಯವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಕೂಡ ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಮತ ಎಣಿಕೆ ಕೇಂದ್ರದತ್ತ ಆಗಮಿಸಿದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
