
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಆರ್ಭಟ ಹೆಚ್ಚುತ್ತಿದ್ದು, ಇಂದು ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಘೋಷಣೆ ಮಾಡಿದ್ದಾರೆ.
ಹೌದು, ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ನೀಡಿಲ್ಲ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ಎಡೆಬಿಡದೇ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
