ಬೆಂಗಳೂರು:ದಕ್ಷಿಣ ಒಳನಾಡಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೇ ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೂಡ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
