ಉಡುಪಿ/ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
