Home ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಬಿ.ನಾಗೇಂದ್ರ

ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಬಿ.ನಾಗೇಂದ್ರ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಗೊಂಡಂತಾಗಿದೆ.

ಬೆಂಗಳೂರಿನ ಗೃಹಕಚೇರಿ ಕೃಷ್ಣಾಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ವಿಪಕ್ಷಗಳ ಒತ್ತಡ ಹೆಚ್ಚಾಗಿತ್ತು.

ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ಆರಂಭಿಸಿದ್ದು, ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು. ಅದರಂತೆ ಇಂದು ಸಿಎಂ ಭೇಟಿಯಾದ ನಾಗೇಂದ್ರ ಅವರು ವಾಲ್ಮೀಕಿ ನಿಗಮದ ಹಗರಣದ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಜೊತೆಗೆ 50 ಕೋಟಿ ರೂ. ಗೂ ಹೆಚ್ಚಿನ ಹಣ ದುರುಪಯೋಗವಾಗಿರುವ ಹಿನ್ನೆಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎಸ್‌ಐಟಿ ತನಿಖೆ ಆರಂಭಿಸಿದೆ.

 
Previous articleಹೃದಯಾಘಾತಕ್ಕೊಳಗಾಗಿದ್ದ ಶಾಲಾ ಬಸ್‌ ಚಾಲಕ ನಿಧನ: ಬಸ್ ನಲ್ಲಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರು
Next articleಉಡುಪಿ ತಾಲೂಕು ಪಂಚಾಯತ್‌ ಕಟ್ಟಡದಲ್ಲಿ ಸ್ಥಗಿತಗೊಂಡ ಲಿಫ್ಟ್:‌ ಲಿಫ್ಟ್‌ ನಲ್ಲಿ ಸಿಲುಕಿಕೊಂಡ ನಾಲ್ವರ ಪರದಾಟ