ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಟಿ ಸಿವಿಲ್ ಕೋರ್ಟ್ ಒಂದನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಮಗಳಿಗೆ ಬಿ.ಎಸ್.ಯಡಿಯೂರಪ್ಪನವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಿದ್ದರು. ಇದೀಗ ಆ ಮಹಿಳೆಯ ಅನಾರೋಗ್ಯದಿಂದ ನಿಧನರಾಗಿದ್ದು, ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ಸಂತ್ರಸ್ತೆಯ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಬಿ.ಎಸ್.ಯಡಿಯೂರಪ್ಪನವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಬಿಎಸ್‌ವೈ ಬಂಧನಕ್ಕೊಳಗಾಗುವ ಸಾಧ್ಯತೆ ಇದೆ.
