Home ಕರಾವಳಿ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಹೆಡ್‌ ಕಾನ್‌ಸ್ಟೇಬಲ್‌ ಬಿ.ವಿಜಯ್‌ ಕುಮಾರ್‌ ಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ...

ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಹೆಡ್‌ ಕಾನ್‌ಸ್ಟೇಬಲ್‌ ಬಿ.ವಿಜಯ್‌ ಕುಮಾರ್‌ ಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಷ್ಟ್ರಪತಿಯವರು ಆಯ್ದ 19 ಪೊಲೀಸ್‌ ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಿದ್ದಾರೆ. ಇದರಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್‌ ಕಾನ್‌ಸ್ಟೇಬಲ್‌‌ ಆಗಿರುವ ಬಿ.ವಿಜಯ್‌ ಕುಮಾರ್‌ ಅವರು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

2022ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಇವರು, ಇದೀಗ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕಕ್ಕೂ ಭಾಜನರಾಗಿಗಿದ್ದಾರೆ. 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿದ್ದ ಬಿ.ವಿಜಯ್‌ ಕುಮಾರ್‌ ಅವರು ಈವರೆಗೆ ಪಣಂಬೂರು ,ಪುತ್ತೂರು ನಗರ ,ಉರ್ವ ,ಉಡುಪಿ ನಗರ ,ಕುಂದಾಪುರ ,ಉಡುಪಿ ಟ್ರಾಫಿಕ್ ,ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಇನ್ನು, ಕರ್ನಾಟಕದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಇದರಲ್ಲಿ ಓರ್ವ ಪೊಲೀಸ್‌ ಅಧಿಕಾರಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾದರೆ, ಉಳಿದ 18 ಪೊಲೀಸ್‌ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಈ ವರ್ಷ ಒಟ್ಟು 1037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿಗೆ ಘೋಷಣೆ ಮಾಡಲಾಗಿದೆ.

 
Previous articleಮಲಗುವ ಮುನ್ನ ಪ್ರೋಟಿನ್ ಶೇಕ್ ಸೇವಿಸುವುದರಿಂದ ದೇಹದ ತೂಕ ಆಟೋಮ್ಯಾಟಿಕ್ ಇಳಿಕೆಯಾಗುತ್ತೆ
Next articleಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ