
ಮಂಗಳೂರು/ಉಡುಪಿ: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗುತ್ತಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು, ಜೂನ್ 29ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
