
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಲೆಯಾಗುತ್ತಿದ್ದು, ಇಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೊಷಣೆ ಮಾಡಿರಲಿಲ್ಲ. ಆದರೆ, ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಬೈಂದೂರು ತಾಲೂಕಿನ ಕೆಲ ಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಹೌದು, ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ೪೪ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಳೆ, ನೆರೆ, ಇತ್ಯಾದಿಗಳನ್ನು ಗಮನಿಸಿ ಅಗತ್ಯ ಇದ್ದಲ್ಲಿ ಆಯಾ ಶಾಲಾ ಮುಖ್ಯೋಪಾಧ್ಯಾಯರು ಶಾಲೆಗೆ ರಜೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ಕೆ.ಗಣಪತಿ ತಿಳಿಸಿದ್ದಾರೆ.
ಇನ್ನು, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಂಗಳೂರು ತಾಲೂಕಿನ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ ಘೊಷಣೆ ಮಾಡಲಾಗಿದೆ. ಉಡುಪಿಯಲ್ಲಿ ಮಳೆ ಹೆಚ್ಚಿದ್ದರೂ ಕೂಡ ಜಿಲ್ಲಾಡಳಿತ ರಜೆ ಘೋಷಣೆ ಮಾಡದಿರುವ ಹಿನ್ನೆಲೆ ಹಲವೆಡೆ ಪೋಷಕರು ಶಾಲಾ ಶಿಕ್ಷಕರಲ್ಲಿ ರಜೆ ನೀಡುವಂತೆ ಮನವಿ ಮಾಡಿಕೊಂಡಿರುವ ಹಿನ್ನೆಲೆ ಶಾಲಾ ಆಡಳಿತ ಮಂಡಳಿ ರಜೆ ಘೊಷಿಸಿದೆ.
