Home ಕರ್ನಾಟಕ ಕರಾವಳಿ ಮಾ.1 -2 ರಂದು ವಕೀಲರ ಸಂಘದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ: ಟ್ರೋಫಿ ಅನಾವರಣ

ಮಾ.1 -2 ರಂದು ವಕೀಲರ ಸಂಘದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ: ಟ್ರೋಫಿ ಅನಾವರಣ

0
ಮಾ.1 -2 ರಂದು ವಕೀಲರ ಸಂಘದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ: ಟ್ರೋಫಿ ಅನಾವರಣ

ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಅಂಗವಾಗಿ ಎಮ್‌ಜಿ‌ಎಮ್ ಮೈದಾನದಲ್ಲಿ ಮಾ.1 -2 ರಂದು ಆಯೋಜಿಸಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದ ಟ್ರೋಫಿಯನ್ನು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು, ಕ್ರೀಡಾಕೂಟಗಳು ಪ್ರತಿಭೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದೆ. ಉಡುಪಿ ವಕೀಲರ ಸಂಘದ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕಿದೆ. ಸಮಾಜಮುಖಿ ಕಾರ್ಯದಲ್ಲಿ ಮುಂದಿರುವ ಉಡುಪಿ ವಕೀಲರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮಾತನಾಡಿ, ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ 39 ಕ್ರಿಕೆಟ್, 16 ವಾಲಿಬಾಲ್(ಪುರುಷರಿಗೆ), 10 ತ್ರೋಬಾಲ್ ( ಮಹಿಳೆಯರಿಗೆ), 28 ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ತಂಡಗಳು ಭಾಗವಹಿಸಲಿವೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ನ್ಯಾಯಧೀಶ ಶ್ರೀನಿವಾಸ್ ಸುವರ್ಣ, ಸಿಜೆಎಮ್ ಪುರುಷೋತ್ತಮ್.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ ಎ.ಆರ್., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಖಜಾಂಚಿ ಗಂಗಾಧರ ಎಚ್.ಎಮ್., ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರು, ವಿವಿಧ ಉಪಸಮಿತಿಗಳ ಸಂಚಾಲಕರಾದ ಎಮ್.ಶಾಂತಾರಾಮ್ ಶೆಟ್ಟಿ, ದಿವಾಕರ್ ಎಮ್ ಶೆಟ್ಟಿ, ಬಿ. ನಾಗರಾಜ್, ಪ್ರವೀಣ್ ಎಮ್ ಪೂಜಾರಿ, ಆರೂರ್ ಸುಕೇಶ್ ಶೆಟ್ಟಿ, ಗಣೇಶ್ ಕುಮಾರ್ ಮಟ್ಟು, ಪಂದ್ಯಾಟದ ಉಸ್ತುವಾರಿಗಳಾದ ಸಚಿನ್ ಕುಮಾರ್ ಶೆಟ್ಟಿ, ಗಂಗಾಧರ ಶೇರಿಗಾರ್, ಯೋಗಿಶ್ ಕುಮಾರ್ ಸಾಲಿಗ್ರಾಮ, ಸ್ಯಾಂಡ್ರಾ ಆ್ಯನ್ಸಿಲ್ಲಾ ಡಿಸೋಜಾ, ನ್ಯಾಯವಾದಿಗಳಾದ ಶಶಿರಾಜ್ ಪೈಯ್ಯಾರು, ಶಿವಾನಂದ್ ಪಾಂಗಾಳ, ಜಯಂತ್ ರಾವ್, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮಗಳ ವಿವರ:

ಪಂದ್ಯಾಕೂಟವನ್ನು ಮಾ.1 ರ ಸಂಜೆ 4 ಗಂಟೆಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಧೀಶ ನ್ಯಾ| ಕಾಮೇಶ್ವರ್ ರಾವ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ| ಇ.ಎಸ್.ಇಂದಿರೇಶ್ ವಹಿಸಲಿದ್ದಾರೆ. ಕರ್ನಾಟಕ ಹೈಕೋರ್ಟಿನ ನ್ಯಾಯಧೀಶ ನ್ಯಾ| ರಾಜೇಶ್ ರೈ ಕೆ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗು ಎಂಆರ್‌ಜಿ ಗ್ರೂಪಿನ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಭಾಗವಹಿಸಲಿದ್ದಾರೆ.

ಮಾ. 2 ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‍ನ ಸದಸ್ಯ ಪಿ.ಪಿ. ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ರಘುಪತಿ ಭಟ್ ಭಾಗವಹಿಸಲಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಊಟ ಮತ್ತು ವಸತಿ ಸೌಲಭ್ಯವನ್ನು ಉಡುಪಿ ವಕೀಲರ ಸಂಘದ ವತಿಯಿಂದ ವ್ಯವಸ್ಥೆಗೊಳಿಸಲಾಗಿದೆ. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು.

 

 

LEAVE A REPLY

Please enter your comment!
Please enter your name here