
ಮಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಸ್ಥಳೀಯ ಗ್ರಾಮಸ್ಥರಿಂದ ಹಾಕಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಮಂಡ್ಯದ ಗ್ರಾಮಸ್ಥರ ಮತ್ತು ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಅಧ್ಯಕ್ಷ ಸುದರ್ಶನ್, ಕೆ. ಉದಯ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.
