Home ಕರ್ನಾಟಕ ಕರಾವಳಿ ಉಡುಪಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ

0
ಉಡುಪಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರಕಾರದ ಸಾಧನೆಗಳು, ರಾಜ್ಯ ಸರಕಾರದ ಆಡಳಿತ ವೈಫಲ್ಯ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕುರಿತು ಮಾಹಿತಿ ನೀಡಿದರು.

ಪಕ್ಷದ ಹಿರಿಯ ನಾಯಕರಾದ ಸೋಮಶೇಖರ ಭಟ್, ಬಿ.ಸುಧಾಕರ ಶೆಟ್ಟಿ, ಸಂಘದ ಹಿರಿಯರಾದ ಗೋಪಾಲ ಚೆಟ್ಟಿಯಾರ್ ಮಂಗಳೂರು ಹಾಗೂ ಪ್ರೇಮ ಪಡಿಯಾರ್ ಅವರ ನಿಧನದ ಬಗ್ಗೆ ಮೌನ ಪ್ರಾರ್ಥನೆಯೊಂದಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ, ಪಕ್ಷದ ಕಾರ್ಯ ಪದ್ಧತಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ಮಾರ್ಗದರ್ಶನ ನೀಡಿದರು. ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುವ ಅಭಿನಂದನಾ ನಿರ್ಣಯವನ್ನು ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಅವರು ಸಭೆಯಲ್ಲಿ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅನುಮೋದಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಮತ್ತು ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.

 

LEAVE A REPLY

Please enter your comment!
Please enter your name here