
ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು (Legal clinic) ತೆರೆಯಲಾಗಿದ್ದು, ಇದರ ಉದ್ಘಾಟನೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ವಿ.ಕಾಮೇಶ್ವರ್ ರಾವ್ ನಡೆಸಿಕೊಟ್ಟರು.
ಈ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಒಬ್ಬ ವಕೀಲರು ಲಭ್ಯರಿರಲಿದ್ದು, ಸೋಮವಾರ ಹಾಗೂ ಶುಕ್ರವಾರ ಮಧ್ಯಾಹ್ನ 2 ರಿಂದ 6 ರವರೆಗೆ ಕೇಂದ್ರವು ಕಾರ್ಯಾಚರಿಸಲಿದೆ.
ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ, ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರ ಎಸ್. ಗಂಗಣ್ಣನವರ್, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗಿಶ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಉಪಸ್ಥಿತರಿದ್ದರು.
