
ಉಡುಪಿ: ಉಡುಪಿ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಲು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ.
