Home ಕರಾವಳಿ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಶಾನಂದ ಭೇಟಿ

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಶಾನಂದ ಭೇಟಿ

ಕಾಪು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ತಮ್ಮ ಪತ್ನಿಯೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು.

ನ್ಯಾಯಾಧೀಶರಿಗೆ ಉಚ್ಚ ನ್ಯಾಯಾಲಯದ ವಕೀಲರಾದ ಎಂ ಸುಧಾಕರ್‌ ಪೈ, ಕೇತನ್‌ ಬಂಗೇರ, ಅಭಿಷೇಕ್‌ ಮಾರ್ಲ, ಶ್ರೀನಿಧಿ ಹೆಗ್ಡೆಯವರು ಸಾಥ್‌ ನೀಡಿದ್ದು, ಇವರಿಗೆ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ದೇವಿಯ ಅನುಗ್ರಹ ನೀಡಿ ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು,ದೇವಸ್ಥಾನ ಅತ್ಯದ್ಭುತವಾಗಿ ಮೂಡಿಬಂದಿದೆ, ಕಾಪು ಅಮ್ಮನಿಂದ ದೇಶದಲ್ಲಿ ಶಾಂತಿ ಸುಭಿಕ್ಷೆ ನೆಲೆಯಾಗಲಿ, ಎಲ್ಲರಿಗೂ ಮಾರಿಯಮ್ಮ ಅನುಗ್ರಹಿಸಲಿ ಎಂದು ಹೇಳಿದರು.

ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯಾನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ್ ರಾವ್ ಕಲ್ಯಾ, ಚರಿತ ದೇವಾಡಿಗ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 
Previous articleಮಕ್ಕಳ ನೆನಪಿನ ಶಕ್ತಿಗೆ ಬಾದಾಮಿ ರಾಮಬಾಣ
Next articleಕನ್ನಡದ ಹಿರಿಯ ನಟ, ಕಲಾವಿದ ಬ್ಯಾಂಕ್‌ ಜನಾರ್ಧನ್‌ ನಿಧನ