ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಪತ್ರಕರ್ತರ ಅಭ್ಯುದಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕೆಲ ಯೋಜನೆಗಳನ್ನು ಘೋಷಿಸಿದ್ದಾರೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಸಾಶನ ಹೆಚ್ಚಿಸುವುದಾಗಿ ಅವರು ತಿಳಿಸಿದ್ದಾರೆ.
ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು 15,000 ರೂ.ಗಳಿಗೆ ಹಾಗೂ ಕುಟುಂಬಕ್ಕೆ ನೀಡಲಾಗುವ ಮಾಸಾಶನವನ್ನು 6,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
