ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಎ. 5 ರಂದು ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗೆ ತಲುಪಿದ್ದು ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ಮಾತನಾಡಿದ ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ, ಜಯಪ್ರಕಾಶ್ ಹೆಗ್ಡೆಯವರು ಸದಾ ಜನರಿಗೆ ಲಭ್ಯವಿರುವ ವ್ಯಕ್ತಿಯಾಗಿದ್ದು ಸಚಿವ, ಸಂಸದರಾಗಿದ್ದ ಸಮಯದಲ್ಲಿ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕೋಟತಟ್ಟು, ಸಾಲಿಗ್ರಾಮ ಪಟ್ಟಣ ಪಂಚಾಯತ್, ಕೋಡಿ, ಪಾಂಡೇಶ್ವರ, ಐರೋಡಿ ಭಾಗದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪಕ್ಷದ ಹಿರಿಯ ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ನಾಯಕರಾದ ವಿನಯ್ ಕಬ್ಯಾಡಿ, ಪ್ರಕಾಶ್ ಚಂದ್ರ ಶೆಟ್ಟಿ ಕಂಬದ ಕೋಣೆ, ತಿಮ್ಮ ಪೂಜಾರಿ, ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು & ಪಂಚಾಯತ್ ಸದ್ಯಸರು, ಕೆ ಜಯಪ್ರಕಾಶ್ ಹೆಗ್ಡೆ ಅವರ ಹಿತೈಷಿಗಳು, ಎಲ್ಲ ಮುಂಚೂಣಿ ಘಟಕದ ಅಧ್ಯಕ್ಷರು & ಸದ್ಯಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
