Home ಕರಾವಳಿ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಮಾ.15 ರಿಂದ 24ರವರೆಗೆ ಶ್ರೀಮನ್ಮಹಾರಥೋತ್ಸವ ಸಂಭ್ರಮ

ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಮಾ.15 ರಿಂದ 24ರವರೆಗೆ ಶ್ರೀಮನ್ಮಹಾರಥೋತ್ಸವ ಸಂಭ್ರಮ

ಕುಂದಾಪುರ: ಕುಂದಾಪುರ ಸಮೀಪದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶ್ರೀಮನ್ಮಹಾರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮಗಳ ವಿವರ:

ಮಾರ್ಚ್‌ 15ರಂದು ಗಣಪತಿ ಪ್ರಾರ್ಥನೆಯೊಂದಿಗೆ ವಾರ್ಷಿಕ ಜಾತ್ರೆಯ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದೆ. ಧ್ವಜಾರೋಹಣ ಯಾಗ ಶಾಲೆ ಪ್ರವೇಶ ಭೇರಿ ತಾಡನ ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ.

ಮಾ.16ರಿಂದ 21ರವರೆಗೆ ಪ್ರತಿದಿನ ರಾತ್ರಿ ಮಯೂರ ಡೋಲಾ ಪುಷ್ಪಮಂಟಪ ವೃಷಭ ಗಜ ಸಿಂಹ ವಾಹನೋತ್ಸವದ ಪುರಮೆರವಣಿಗೆ ಓಲಗ ಮಂಟಪದವರೆಗೂ ನಡೆಯಲಿದೆ. ಪ್ರತಿದಿನ ಸಂಜೆ ಕಟ್ಟೆ ಉತ್ಸವ ಸ್ವರ್ಣಮುಖಿ ರಂಗ ಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.22ರಂದು ಬೆಳಿಗ್ಗೆ 11.15ಕ್ಕೆ ರಥಾರೋಹಣ ಸಂಜೆ 4ಕ್ಕೆ ರಥ ಅವರೋಹಣ ಜರುಗಲಿದೆ.
ಮಾ.23ರಂದು ಓಕುಳಿ ಉತ್ಸವ ತೆಪ್ಪೋತ್ಸವ ಹಾಗೂ ಅವಭೃತ ಸ್ನಾನ.

24ರಂದು ಬೆಳಿಗ್ಗೆ 7ಕ್ಕೆ ಅಶ್ವಾರೋಹಣೋತ್ಸವದಲ್ಲಿ ಶ್ರೀದೇವಿಯನ್ನು ಕರೆತಂದು ಸರಸ್ವತಿ ಮಂಟಪದಲ್ಲಿ ಕುಳ್ಳಿರಿಸಿ ಯಾಗ ಶಾಲೆಯಲ್ಲಿ ಶಾಂತಿ ತತ್ವ ಕಲಾಭಿವೃದ್ಧಿ ಹೋಮದ ಪೂರ್ಣಾಹುತಿ ನಡೆಯಲಿದೆ.

ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ವ್ಯವಸ್ಥಾಪನಾ ಸಮಿತಿ ಸದಸ್ಯ ತಂತ್ರಿ ಕೆ.ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕ ನಾಯ್ಕ್, ಧನಾಕ್ಷಿ, ಸುಧಾ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ., ಯು.ರಾಜೇಶ್ ಕಾರಂತ್, ರಘುರಾಮ ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಅರ್ಚಕರು, ಸಿಬ್ಬಂದಿಗಳು, ಭಕ್ತರು ಹಾಗೂ ಸ್ಥಳೀಯರ ಸಹಕಾರದಲ್ಲಿ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

 
Previous articleಕೊಪ್ಪಳದಲ್ಲಿ ವಿದೇಶೀ ಮಹಿಳೆ ಅತ್ಯಾಚಾರ ಪ್ರಕರಣ: ಹೋಂಸ್ಟೇ ಬುಕ್ಕಿಂಗ್ ರದ್ದು; ಪ್ರವಾಸಿಗರ ಸಂಖ್ಯೆ ಕುಸಿತ
Next articleರನ್ಯಾ ರಾವ್ ಗೆ ಪ್ರಭಾವಿ ರಾಜಕಾರಣಿ ನಂಟು? ಕೆಐಎಡಿಬಿ ನಿಂದ 12 ಎಕರೆ ಭೂಮಿ ಮಂಜೂರು!